ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.21: ರಾಜ್ಯದಲ್ಲಿ ಮುಂದಿನ 7 ದಿನಗಳ ಒಣಹವೆ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಲ್ಲಿ ಮುಂದಿನ 2-3 ದಿನಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top