(ನ್ಯೂಸ್ ಕಡಬ) newskadaba.com,ಫೆ.23: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ.
ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು..
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಡುಗಳನ್ನು ಬಿಡುಗಡೆಗೊಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕಾರಿ ನಿರ್ಮಾಪಕ ರಾಜೇಶ್ ಕುಡ್ಲ, ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ್, ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಕೋಶಾಧಿಕಾರಿ ಲೊಕೇಶ್ ಶೆಟ್ಟಿ ಮುಚ್ಚೂರು ಕಲ್ಕುಡೆ, ರಾಜೀವ ಶೆಟ್ಟಿ, ಗುಣಪಾಲ ಕಡಂಬ, ಕೆ.ಕೆ.ಪೇಜಾವರ, ಶಶಿರಾಜ್ ಕಾವೂರು, ಮೈಮ್ ರಾಮದಾಸ್ ರಶ್ಮಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.








