ಸುಳ್ಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ



(ನ್ಯೂಸ್‌ ಕಡಬ) newskadaba.com,ಫೆ.24: ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆ ಎಂಬಲ್ಲಿ ಸೋಮವಾರ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದೆ.ಕಾರಿನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.





ಮರ ಬಿದ್ದ ರಭಸಕ್ಕೆ ಉಮ್ಮರ್ ಎಂಬುವವರಿಗೆ ಸೇರಿದ ಬಾಡಿಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಘಟನೆಯಿಂದಾಗಿ ಸುಮಾರು ಅರ್ಧ ಗಂಟೆ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ನಂತರ ಸ್ಥಳೀಯರು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು..






error: Content is protected !!
Scroll to Top