​ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ.

(ನ್ಯೂಸ್‌ ಕಡಬ) newskadaba.com,ಫೆ.27 : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.

ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯದಿಂದ ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ. ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ದೊಡ್ಡ ಹಾನಿಯ ವರದಿಗಳು ಬಂದಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಜನರು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಮಧ್ಯಾಹ್ನ 1.22 ಕ್ಕೆ ಭೂಕಂಪ ಸಂಭವಿಸಿದೆ. ಅದರ ತೀವ್ರತೆ ತುಂಬಾ ಹೆಚ್ಚಾಗಿತ್ತು.

ಬಾಂಗ್ಲಾದೇಶದಲ್ಲೂ ಭೂಕಂಪದ ಅನುಭವವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 27 ರಂದು ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಕೇಂದ್ರಬಿಂದು ಬಾಂಗ್ಲಾದೇಶದ ಖುಲ್ನಾದಿಂದ ನೈಋತ್ಯಕ್ಕೆ 26 ಕಿಲೋಮೀಟರ್ ದೂರದಲ್ಲಿತ್ತು. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭೂಕಂಪದ ತೀವ್ರತೆ ಹೆಚ್ಚು ಕಂಡುಬಂದಿದೆ. ಕಳೆದ ಎರಡು ತಿಂಗಳಲ್ಲಿ ಕೋಲ್ಕತ್ತಾದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದೆ.

Scroll to Top