ಅರ್ಕುಳ: ಬೈಕ್ – ಲಾರಿ ನಡುವೆ ಅಪಘಾತ ► ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಕಾರು ಚಲಿಸಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಮೇ.11. ಬೈಕ್‌ ಸವಾರನೋರ್ವನ ಮೇಲೆ ಕಾರು ಚಲಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅರ್ಕುಳ ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ಮೃತ ಸವಾರನನ್ನು ಫರಂಗಿಪೇಟೆ ನಿವಾಸಿ ಉಮರ್ (52) ಎಂದು ಗುರುತಿಸಲಾಗಿದೆ. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟರೆನ್ನಲಾಗಿದೆ. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟರೆನ್ನಲಾಗಿದೆ.

Also Read  ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ ► ಫಲಿತಾಂಶ ಪಡೆಯಲು ಕ್ಲಿಕ್ ಮಾಡಿ

error: Content is protected !!
Scroll to Top