ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಎಪ್ರಿಲ್ 5ರಂದು ಡಾ.ಬಾಬು ಜಗಜೀವನರಾಂ 119ನೇ ಜನ್ಮ ದಿನಾಚರಣೆ ಹಾಗೂ ಎಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ.
ಆದ್ದರಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು   ಮಾರ್ಚ್ 6 ರೊಳಗೆ ಸಂಪೂರ್ಣ ಮಾಹಿತಿ ಹಾಗೂ ದಾಖಲೆಗಳನ್ನು ನಮೂನೆಯಲ್ಲಿ ಭರ್ತಿ ಮಾಡಿ  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ  ಮಂಗಳೂರು ತಾಲೂಕು – 0824-2441269, ಬಂಟ್ವಾಳ- 08255-230968, ಪುತ್ತೂರು- 08251-298803, ಬೆಳ್ತಂಗಡಿ-08256-233528, ಸುಳ್ಯ- 08257-233527  ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ  ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top