ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ

(ನ್ಯೂಸ್ ಕಡಬ) newskadaba.com ಫೆ. 28.  ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ.

ಘಟನೆಯಲ್ಲಿ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಭಾರೀ ಅನಾಹುತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top