ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಮಾರ್ಚ್ 10ರೊಳಗೆ ಸರಕಾರಿ ವೈದ್ಯರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರಕಾರಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆಯನ್ನು ನೀಡಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ದೀಪಕ್ ರೈ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ 15ರ ವರೆಗೆ ಕಪ್ಪುಪಟ್ಟಿ ಧರಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ಒದಗಿಸಲಾಗುವುದು. ಮಾರ್ಚ್ 16ರಿಂದ ಸಂಪೂರ್ಣವಾಗಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದರು. ಈ ಸಂದರ್ಭ ಡಾ.ಅಕ್ಷತಾ, ಡಾ.ರಾಜೇಶ್, ಡಾ.ತುಫೇಲ್, ಡಾ.ಶರತ್ ಬಾಬು, ಮಹಾಲಕ್ಷ್ಮೀ ಮತ್ತು ಯೊಗೀಶ್ ಮೊದಲಾದವರು ಉಪಸ್ಥಿತರಿದ್ದರು.

Scroll to Top