(ನ್ಯೂಸ್ ಕಡಬ) newskadaba.com, ಫೆ.28: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.
ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ಜಗದೀಶ್ ವಿ.ಎನ್ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದರು. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಜ್ಯೋತಿ ನಾಯಕ್ ಪ್ರಕರಣದಲ್ಲಿ ವಾದ ಮಂಡಿಸಿದರು.








