ಕಡಬ: ಪಿಕಪ್ ಹರಿದು ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಕಾಲಿನ ಮೇಲೆ ಪಿಕಪ್ ವಾಹನವೊಂದು ಚಲಿಸಿದ ಪರಿಣಾಮ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಕಡಬದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಗಾಯಾಳುವನ್ನು ಕಡಬ ತಾಲೂಕಿನ ಕೋಡಿಂಬಾಳ ನಿವಾಸಿ ಸತೀಶ್ (30) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದಾಗ ಪಿಕಪ್ ವಾಹನದ ಹಿಂಬದಿಯ ಚಕ್ರ ಇವರ ಕಾಲಿನ ಮೇಲೆ ಚಲಿಸಿದ್ದು, ಪರಿಣಾಮ ಕಾಲಿಗೆ ಗಾಯವಾಗಿದೆ. ಇವರಿಗೆ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Scroll to Top