ಬಲ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ರಬ್ಬರ್ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಲ್ಯದಲ್ಲಿ ಶುಕ್ರವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಬಲ್ಯ ಗ್ರಾಮದ ಮತ್ರಾಡಿ‌ ನಿವಾಸಿ ಅಬ್ರಹಾಂ(49) ಎಂದು ಗುರುತಿಸಲಾಗಿದೆ. ಮಾನಸಿಕ ಖನ್ನತೆಗೊಳಗಾಗಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಶೆರ್ಲಿ ಅಬ್ರಹಾಂ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top