ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಮೃತ್ಯು – News Kadaba

ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಮೃತ್ಯು

(ನ್ಯೂಸ್‌ ಕಡಬ) newskadaba.com,ಮಾ.02: : ಪೊಲೀಸ್ ಮ್ಯಾರಥಾನ್ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಎಸ್‌ಐ (SI) ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಹೃದಯವೈಫಲ್ಯದಿಂದ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ ಅಧಿಕಾರಿ.

ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಹುಸೇನ್ ಸಾವನ್ನು ಆಸ್ಪತ್ರೆ ವೈದ್ಯರು ದೃಢಪಡಿಸಿದರು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನಾಸಿರ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿ. 58 ವರ್ಷದ ನಾಸಿರ್ ಹುಸೇನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದರು. ಇತ್ತೀಚೆಗೆ ಶೆಟ್ಟಿಕಟ್ಟೆ ಅಪಘಾತ ನಡೆದಾಗ ಅಧಿಕಾರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕುಂದಾಪುರ ಗ್ರಾಮಾಂತರ ಠಾಣೆಗೆ ಬಂದಿದ್ದರು.

Scroll to Top