ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ – News Kadaba

ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮಾ.04 : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ಸುಳ್ಯ ಕೋರ್ಟಿನಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆರೋಪಿಗೆ ಕೆಳಕಂಡಂತೆ ಶಿಕ್ಷೆ ವಿಧಿಸಿದ್ದಾರೆ:

  • ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
  • ಕಲಂ 132 ರಡಿಯಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.
  • ಕಲಂ 262 ರಡಿಯಲ್ಲಿ ಕಾನೂನುಬದ್ಧ ವಶಕ್ಕೆ ಪಡೆಯುವ ಸಂದರ್ಭದಲ್ಲಿ ತಡೆ ಉಂಟುಮಾಡಿದ ಕಾರಣಕ್ಕೆ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ.

ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕುಮಾರಿ ಪ್ರೀತಿ ಎಂ.ಸಿ. ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

Scroll to Top