ದುಬೈನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ

(ನ್ಯೂಸ್‌ ಕಡಬ) newskadaba.com,  ಮಾ.04 : ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಕಟ್ಟಡದ ಮೇಲ್ಭಾಗದಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಅಗ್ನಿಶಾಮಕ ಪಡೆತಕ್ಷಣ ನಿಯಂತ್ರಣಕ್ಕೆ ತಂದಿದೆ.ಘಟನೆಯ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ದೃಢಪಡಿಸಿದ್ದಾರೆ. ಈ ದಾಳಿ ಮಧ್ಯಪ್ರಾಚ್ಯದಲ್ಲಿ ನಿರಂತರ ನಡೆಯುತ್ತಿರುವಇರಾನ್-ಇಸ್ರೇಲ್ ಸಂಘರ್ಷದ ದಾಳಿ-ಪ್ರತಿದಾಳಿ ಘಟನಾಕ್ರಮದ ಭಾಗವಾಗಿದೆ.

ಇದಕ್ಕೂ ಮುನ್ನ ಇಸ್ರೇಲ್-ಅಮೆರಿಕದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಅಸ್ಪಷ್ಟತೆ ಹಾಗೂ ಕೋಪದಿಂದ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ.

ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆಯೂ ಎರಡು ಡ್ರೋನ್‌ಗಳು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದವು. ಸೋಮವಾರ ಕುವೈತ್‌ನಲ್ಲಿ ಅಮೆರಿಕ ರಾಯಭಾರಿ ಕಚೇರಿಯ ಕಟ್ಟಡ ಹೊಗೆಯಿಂದ ತುಂಬಿತ್ತು. ಈ ಘಟನೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದು, ಸ್ಥಳೀಯ ಮತ್ತು ವಿದೇಶಿ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

Scroll to Top