ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಟೊಮೊಟೊ ದರ ಏಕಾಏಕಿ ಇಳಿಕೆ – News Kadaba

ಟೊಮೊಟೊ ದರ ಏಕಾಏಕಿ ಇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಬೆಂಗಳೂರು: ಏಷ್ಯಾದ ಅತೀ ದೊಡ್ಡ ಟೊಮೇಟೊ ಮಾರುಕಟ್ಟೆಗಳಲ್ಲಿ ಒಂದಾದ ನಮ್ಮ ರಾಜ್ಯದ ಕೋಲಾರ ಮಾರುಕಟ್ಟೆಯಲ್ಲಿ ಬೆಲೆಯ ಏರಿಳಿತ ಸಾಮಾನ್ಯವಾದರೂ, ಈ ಬಾರಿಯ ತೀವ್ರ ಬೆಲೆ ಕುಸಿತ ರೈತರನ್ನು ಹೆಚ್ಚು ಸಂಕಷ್ಟಕ್ಕೆ ತಳ್ಳಿದೆ.ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ.

ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ. ಸ್ಥಳೀಯ ಉತ್ಪಾದನೆ ಹೆಚ್ಚಾಗಿರುವುದು ಮತ್ತು ಬೇಡಿಕೆ ಕಡಿಮೆಯಾಗಿರುವುದು ಕೋಲಾರ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಇದು ಮಾರುಕಟ್ಟೆಯಲ್ಲಿ ಬೆಲೆ ಕುಸಿಯಲು ಪ್ರಮುಖ ಕಾರಣವಾಗಿದೆ.ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ 80 ಸಾವಿರಕ್ಕೂ ಹೆಚ್ಚು ವೆಚ್ಚವಾಗಿ ದ್ದರೂ, ಮಾರುಕಟ್ಟೆಯಲ್ಲಿ ಟೊಮೇಟೊ ಧಾರಣೆ ಪಾತಾಳಕ್ಕೆ ಕುಸಿದಿದೆ. ಪ್ರತಿದಿನ ಬೆಲೆ ಕುಸಿಯುತ್ತಿರುವುದರಿಂದ ಲಾಭದ ನಿರೀಕ್ಷೆಯಲ್ಲಿದ್ದ ರೈತರು ಭಾರೀ ನಿರಾಶೆಗೊಳಗಾಗಿ ದ್ದಾರೆ. ಕೋಲಾರದಲ್ಲಿ ಕಳೆದ ತಿಂಗಳು 15 ಕೆ.ಜಿ ಬಾಕ್ಸ್‌ಗೆ ರು.300-400 ಇದ್ದ ದರವು ಇದೀಗ ಏಕಾಏಕಿ 50-130 ರು.ಗೆ ಕುಸಿತ ಕಂಡಿದೆ.

Scroll to Top