ಬೆಳ್ಳಾರೆ ಜ್ಞಾನದೀಪಕ್ಕೆ ಶೇ.100 ಫಲಿತಾಂಶ ► ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.12. 2017-18ನೇ ಸಾಲಿನ ಪಿಯುಸಿ ಕಲಾ ವಿಭಾಗದ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಬೆಳ್ಳಾರೆ ಜ್ಞಾನದೀಪ ಶಿಕ್ಷಣ  ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಸಂಸ್ಥೆಯಲ್ಲಿ ನಡೆಯಿತು.

ಖಾಸಗಿಯಾಗಿ ಪಿಯುಸಿ ಪರೀಕ್ಷೆ ಬರೆದು ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ ತಂದುಕೊಟ್ಟ ಸಂಸ್ಥೆಯ ಎಲ್ಲಾ 16 ಮಂದಿ ವಿದ್ಯಾರ್ಥಿಗಳನ್ನು ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಅಭಿನಂದಿಸಿ ಮಾತನಾಡಿ, ಶೈಕ್ಷಣಿಕ ಜೀವನದಲ್ಲಿ ಒಮ್ಮೆ ಎಡವಿದರೂ ಆಸಕ್ತಿಯಿಂದ ಅಧ್ಯಯನ ನಡೆಸಿದಲ್ಲಿ ಉತ್ತಮ ಸಾಧನೆ ತೋರಲು ಸಾಧ್ಯವಿದೆ ಎಂಬುದನ್ನು ಸಾಬೀತು ಪಡಿಸಿ ವಿದ್ಯಾರ್ಥಿಗಳು ಸಂಸ್ಥೆ ಹಾಗೂ ಹೆತ್ತವರಿಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ ಎಂದರು. ಸಂಸ್ಥೆಯ ಉಪನ್ಯಾಸಕಿಯರುಗಳಾದ ಸರಸ್ವತಿ ಮತ್ತು ಅಮಿತಾ ವೈ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Also Read  ಪುತ್ತೂರು: ಅಪಾಯಕಾರಿ ತೆಂಗಿನ ಮರ ತೆರವುಗೊಳಿಸುವಂತೆ ಪೆಟ್ರೋಲ್ ಸಿಬ್ಬಂದಿಗಳಿಂದ ಸಂಬಂಧಿಸಿದ ಇಲಾಖೆಗೆ ಮಾಹಿತಿ

 

error: Content is protected !!
Scroll to Top