(ನ್ಯೂಸ್ ಕಡಬ) newskadaba.com, ಮಾ.12, ಕಡಬ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
. ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








