(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 17. ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ಎಂಬಾತನು, ನ್ಯಾಯಾಲಯದ ಆದೇಶದಂತೆ ಮಾ.15ರಂದು ಸಮುದಾಯ ಸೇವೆಯ ಭಾಗವಾಗಿ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ನಿಯಂತ್ರಣ ಕಾರ್ಯವನ್ನು ನಿರ್ವಹಿಸಿದ್ದಾನೆ.
ಇದಾದ ಬಳಿಕ, ತಾನು ನಡೆಸಿದ ಸಮುದಾಯ ಸೇವೆಯ ಕುರಿತ ಚಿತ್ರಗಳು ಮತ್ತು ಮಾಹಿತಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಮನೆಯಲ್ಲಿ ಗಮನಿಸಿದ ರಕ್ಷಿತ್ ಜಿ ಇದರಿಂದ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ತಕ್ಷಣ ಆತನನ್ನು ಚಿಕಿತ್ಸೆಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.








