ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್



(ನ್ಯೂಸ್‌ ಕಡಬ) newskadaba.com,  ಮಾ.17 ಐಸಿಸ್ (ISIS) ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ..





ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ…






ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು ಅರೆಸ್ಟ್‌ ಮಾಡಲಾಗಿದೆ. ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿರುವ ಈತ, ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಡಿಸ್ಕಾರ್ಡ್‌ನಂತಹ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ಐಸಿಸ್ ನಿರ್ವಾಹಕರ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!
Scroll to Top