(ನ್ಯೂಸ್ ಕಡಬ) newskadaba.com,ಮಾ.19 ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಸೇವಿಸಿದ ಬಾಲಕನೋರ್ವ ಅಸ್ವಸ್ಥಗೊಂಡು ಮೃತಪಟ್ಟ ದಾರುಣ ಘಟನೆ ರಾಮಕುಂಜದಲ್ಲಿ ಬುಧವಾರ (ಮಾ. 18) ಸಂಭವಿಸಿದೆ.
ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ, 4ನೇ ತರಗತಿ ವಿದ್ಯಾರ್ಥಿ ‘’ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಮನೆಯಲ್ಲಿ ಔಷಧಿ ನೀಡಲಾಗಿತ್ತು. ಆದರೆ, ಔಷಧಿ ಸೇವಿಸಿದ ಕೆಲವೇ ಸಮಯದ ನಂತರ ಬಾಲಕ ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದೆ.
ಬಾಲಕ ಅಸ್ವಸ್ಥಗೊಳ್ಳುತ್ತಿದ್ದಂತೆ ಗಾಬರಿಗೊಂಡ ಪೋಷಕರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಸ್ಥಳೀಯ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.ಮಗನ ಸಾವಿನಿಂದಾಗಿ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.









