(ನ್ಯೂಸ್ ಕಡಬ) newskadaba.com ,ಮಾ.24 : ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆಂದು ಹೇಳಿದರು.
ವಿರೋಧ ಪಕ್ಷದ ಸದಸ್ಯರು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನದ ಬಗ್ಗೆ ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಚಿಚವರು ಪ್ರತಿಕ್ರಿಯಿಸಿದರು.
ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಮೊಬೈಲ್ ಅತಿಯಾದ ಬಳಕೆ ಗಂಭೀರ ಸಮಸ್ಯೆಯಾಗಿದೆ. ಕೆಲವರು ಆತ್ಮಹತ್ಯೆ ಯತ್ನಕ್ಕೂ ಮುಂದಾಗುತ್ತಿದ್ದಾರೆ. ಹೀಗಾಗಿ, ದೇಶದಲ್ಲೇ ಮೊದಲ ಬಾರಿಗೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ” ಎಂದು ಹೇಳಿದರು.









