ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ



(ನ್ಯೂಸ್‌ ಕಡಬ) newskadaba.com,  ಮಾ.27 : ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಯುವ ಜನತಾದಳ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತುಸಭೆಯಲ್ಲಿ ಮಾತನಾಡಿದ ಅಕ್ಷಿತ್ ಸುವರ್ಣ ಅವರು, ಪಕ್ಷ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು.







ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವಕರನ್ನು ಸಂಘಟಿಸುವ ಮೂಲಕ ಗ್ರಾಮ ಹಾಗೂ ನಗರ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು…ಮುಂಬರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸದಸ್ಯತ್ವ ಅಭಿಯಾನ, ಸಭೆಗಳು ಹಾಗೂ ಸಂಘಟನೆ ವಿಸ್ತರಣಾ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಯುವಕರಿಗೆ ಕರೆ ನೀಡಿದರು.






ಈ ಸಂದರ್ಭದಲ್ಲಿ ಯುವ ಜನತಾದಳದಿಂದ ಶೀಘ್ರದಲ್ಲೇ ಜಿಲ್ಲಾ ಮಟ್ಟದ ಭವ್ಯ ಸಮಾವೇಶವನ್ನು ಆಯೋಜಿಸುವ ನಿರ್ಧಾರ ಕೈಗೊಳ್ಳಲಾಯಿತು. ಸಮಾವೇಶದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಪಕ್ಷದತ್ತ ಸೆಳೆಯುವುದು ಹಾಗೂ ಪಕ್ಷದ ತತ್ವಗಳನ್ನು ಜನರಿಗೆ ತಲುಪಿಸುವುದು ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.ಸಭೆಯ ಅಂತ್ಯದಲ್ಲಿ ಎಲ್ಲ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಲು ಸಮನ್ವಯದಿಂದ ಕೆಲಸ ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯನ್ನು ಜಿಲ್ಲಾ ಯುವ ಮಹಾಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಚಿಮ್ಟಿಕಲ್ಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗೂ ಜಿಲ್ಲಾ ಸಂಘಟನಾ ಉಸ್ತುವಾರಿ ರತೀಶ್ ಕರ್ಕೆರ ವಂದಿಸಿದರು.ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಪುತ್ತೂರು ಕ್ಷೇತ್ರ ಅಧ್ಯಕ್ಷ ಶಿವ ಸಾಲ್ಯಾನ್, ಕಡಬ ತಾಲೂಕು ಯುವ ಅಧ್ಯಕ್ಷ ಹರಿಪ್ರಸಾದ್, ಯುವ ಮಹಾಪ್ರಧಾನ ಕಾರ್ಯದರ್ಶಿ ಸುಮಿತ್ ಸುವರ್ಣ ಸೇರಿದಂತೆ ಹಲವು ಯುವ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top