ಹೈಕಮಾಂಡ್ ದಲಿತರನ್ನು ಮುಖ್ಯಮಂತ್ರಿ ಮಾಡುವುದಾದರೆ ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ಧ ► ಅಚ್ಚರಿಯ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಮೇ.13. ದಲಿತರನ್ನು ಮುಖ್ಯಮಂತ್ರಿ ಮಾಡಲು ಅವಕಾಶ ನೀಡುವುದಾಗಿ ಹೈಕಮಾಂಡ್ ನಿರ್ಧರಿಸಿದರೆ‌ ನಾನು ಮುಖ್ಯಮಂತ್ರಿಯಾಗುವುದರಿಂದ ಹಿಂಜರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ದಲಿತರನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಿದರೆ ನಾನು ಮುಖ್ಯಮಂತ್ರಿ ಪಟ್ಟವನ್ನು ತ್ಯಾಗ ಮಾಡಲು ಸಿದ್ಧನಾಗಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ಅದಕ್ಕೆ ನನ್ನದೇನೂ ಆಕ್ಷೇಪವಿಲ್ಲ. 2013 ರ ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇಂದಿಗೆ ಐದು ವರುಷಗಳಾಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಆಡಳಿತ ನೀಡಿದ ಸಂತೃಪ್ತಿ ನನಗಿದೆ. ಈ ಬಾರಿಯೂ ಕರ್ನಾಟಕದಲ್ಲಿ 120 ಕ್ಕಿಂತಲೂ ಅಧಿಕ ಸ್ಥಾನಗಳನ್ನು ಪಡೆದು ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

error: Content is protected !!
Scroll to Top