(ನ್ಯೂಸ್ ಕಡಬ) newskadaba.com, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.









