(ನ್ಯೂಸ್ ಕಡಬ) newskadaba.com, ಮಾ.31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,929 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,685 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,197 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,929 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,685 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ









