(ನ್ಯೂಸ್ ಕಡಬ) newskadaba.com,ಎ.01 :ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ…
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ..









