ಇಂದು ಬೆಳಗ್ಗೆ 8 ಗಂಟೆಯಿಂದ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭ ► ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ರಾಜ್ಯಾದ್ಯಂತ ಮೇ 12 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಇಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆಗಾಗಿ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಮಂಗಳೂರಿನ ಬೋಂದೆಲ್ ನಲ್ಲಿರುವ ಮಹಾತ್ಮ ಗಾಂಧಿ ಶತಾಬ್ದಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ ಮತ‌ ಎಣಿಕೆ ಕಾರ್ಯವು ಆರಂಭಗೊಳ್ಳಲಿದ್ದು, ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ತಿಳಿದು ಬರಲಿದೆ. ಚುನಾವಣಾ ಆಯೋಗವು ನೀಡಿರುವ ಎಲ್ಲಾ ನಿಯಮಗಳನ್ನು ತಪ್ಪದೇ ಪಾಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  ಕಡಬ: ಗೃಹರಕ್ಷಕ ದಳ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ಶ್ರೀ ತೀರ್ಥೇಶ್ ರವರಿಗೆ ಹಸ್ತಾಂತರ

error: Content is protected !!
Scroll to Top