ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.04:  ಇಂದಿನಿಂದ ಏ.7ರವರೆಗೆ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ…

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಅಲ್ಲದೇ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top