(ನ್ಯೂಸ್ ಕಡಬ) newskadaba.com, ಎ.04: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಆಟೋ ಗ್ಯಾಸ್‌ಗೆ ಅಭಾವ, ಗ್ಯಾಸ್ ಬಂಕ್‌ನವರಿಂದ ದುಬಾರಿ ದರ ವಸೂಲಿಯಿಂದಾಗಿ ಕೆಲ ಆಟೋ ಚಾಲಕರು ಶೇ.10 ರಷ್ಟು ಬಾಡಿಗೆ ಹಣವನ್ನು ಹೆಚ್ಚುವರಿಯಾಗಿ ನೀಡಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಗಂಟೆಗಟ್ಟಲೆ ಕಾದರೂ ಆಟೋ ಗ್ಯಾಸ್ ಸಿಗುತ್ತಿಲ್ಲ. ಮತ್ತೊಂದೆಡೆ ಗ್ಯಾಸ್ ಬಂಕ್‌ನವರು ದುಬಾರಿ ದರಕ್ಕೆ ಗ್ಯಾಸ್ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಹೆಚ್ಚುವರಿಯಾಗಿ ಶೇ.10 ರಷ್ಟು ಬಾಡಿಗೆ ನೀಡಬೇಕು ಎಂದು ಬೆಂಗಳೂರು ಆಟೋ ಸೇನೆ ಹೆಸರಿನಲ್ಲಿ ಮೀಟರ್ ಬಳಿ ಬೋರ್ಡ್‌ಗಳನ್ನು ಹಾಕಿರುವುದು ಶುಕ್ರವಾರ ನಗರದಲ್ಲಿ ಕಂಡುಬಂತು…
ಇನ್ನು, ಗ್ಯಾಸ್‌ಗಾಗಿ ಆಟೋ ಚಾಲಕರ ಪರದಾಟ ಮುಂದುವರೆದಿದೆ. ಲಗ್ಗೆರೆ ಬಳಿಯ ಎಲ್‌ಪಿಜಿ ಬಂಕ್‌ನಲ್ಲಿ ಗ್ಯಾಸ್‌ಗಾಗಿ ಗುರುವಾರ ಸಂಜೆಯಿಂದಲೂ 800 ಕ್ಕೂ ಅಧಿಕ ಆಟೋಗಳನ್ನು ರಸ್ತೆಯ ಎರಡೂ ಬದಿಯಲ್ಲಿ ನಿಲ್ಲಿಸಿದ್ದು ಶುಕ್ರವಾರ ಮಧ್ಯಾಹ್ನವಾದರೂ ಚಾಲಕರು ಕಾಯುತ್ತಿದ್ದುದು ಕಂಡುಬಂತು. ಬಹಳ ದೂರದಿಂದಲೂ ಗ್ಯಾಸ್‌ಗಾಗಿ ಚಾಲಕರು ಆಗಮಿಸಿದ್ದು ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು..








