ಎಸ್.ಟಿ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಾವಕಾಶ- ಅರ್ಜಿ ಆಹ್ವಾನ



(ನ್ಯೂಸ್ ಕಡಬ) newsksdaba.com ಏ. 06. 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಮೇ 4 ಕೊನೆಯ  ದಿನ.
ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ: 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಅಂಚೆ 3) ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ 4) ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, 5) ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ,  6) ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಉಜಿರೆ, 7) ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, 8) ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ, ಮಡಂತ್ಯಾರು, ಬೆಳ್ತಂಗಡಿ.
ವಿದ್ಯಾರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಬೇಕು. (ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು) ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.2.50ಲಕ್ಷಗಳ ಮಿತಿಯೊಳಗಿರಬೇಕು (ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು). ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಅತಿ ಹಿಂದುಳಿದ ವರ್ಗದವರಿಗೆ ಈ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ. (ಪೌರ ಕಾರ್ಮಿಕ ಮಕ್ಕಳು, ಸಫಾಯಿ ಕರ್ಮಚಾರಿಗಳವರ ಮಕ್ಕಳು, ಸ್ಮಶಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರು, ಸಿಂಗಲ್ ಪ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲ ಬಾದೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೊಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳು), 2 ಪಾಸಪೋರ್ಟ್  ಸೈಜ್ ಭಾವಚಿತ್ರ, ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. ವಿದ್ಯಾರ್ಥಿಯು 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇ. 60% ಅಂಕ ಪಡೆದಿರಬೇಕು. ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಲಗ್ತೀಕರಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ನಿಗಧಿತ ಗುರಿಗಳಿಗಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾದಲ್ಲಿ ವಿದ್ಯಾರ್ಥಿಗಳನ್ನು ಡಯಟ್ ಮೂಲಕ ಪ್ರವೇಶ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಯಾಯ ತಾಲೂಕುಗಳ  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಚೇರಿಗೆ ಸಲ್ಲಿಸಬೇಕು.







 

ಹೆಚ್ಚಿನ ಮಾಹಿತಿಗೆ  ನಗರದ ಕೊಟ್ಟಾರದ ಅಬ್ಬಕ್ಕ ನಗರದಲ್ಲಿರುವ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ  ಕಚೇರಿ ದೂ.ಸಂ: 0824-2451269 ಸಂಪರ್ಕಿಸಬಹುದು ಎಂದು ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top