(ನ್ಯೂಸ್ ಕಡಬ) newsksdaba.com ಏ. 06. 2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ 8 ಅಭ್ಯರ್ಥಿಗಳಿಗೆ ಅವಕಾಶ ಇದೆ. ಅಭ್ಯರ್ಥಿಗಳ ಗುರಿಯನ್ನು ಸರ್ಕಾರದ ಮೀಸಲಾತಿ ನಿಯಮಾವಳಿಗಳನ್ನು ಪಾಲಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ/ ತಾಯಿ/ ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಆಸಕ್ತರು ಅರ್ಜಿಯ ನಮೂನೆಯನ್ನು ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಅಥವಾ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ)/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಗಳೂರುರವರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಎಪ್ರಿಲ್ 15 ರೊಳಗಾಗಿ ಸಲ್ಲಿಸಬೇಕು.
ಎಪ್ರಿಲ್ 23 ರಂದು ಬೆಳಿಗ್ಗೆ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಎಪ್ರಿಲ್ 27 ರಂದು ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಅರ್ಜಿ ಶುಲ್ಕವು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.30 ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.15 ಇದ್ದು, ಮೊತ್ತವನ್ನು IPO/ಡಿಡಿಯನ್ನು ತೋಟಗಾರಿಕೆ ಜಂಟಿನಿರ್ದೇಶಕರು, (ಜಿಲ್ಲಾ ಪಂಚಾಯತ್) ಮಂಗಳೂರು ಅವರ ಹೆಸರಿನಲ್ಲಿ ಪಡೆಯಬೇಕಾಗಿರುತ್ತದೆ. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸ್ಸಿನ ಮಿತಿ 33 ರಿಂದ 65 ವರ್ಷ ನಿಗದಿಗೊಳಿಸಲಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









