(ನ್ಯೂಸ್ ಕಡಬ) newsksdaba.com ಏ. 08. ಎಪ್ರಿಲ್ 7ರಿಂದ ನಡೆಯಲಿರುವ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7 ಮೌಲ್ಯಮಾಪನಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆ ಮೌಲ್ಯಮಾಪನ: ನಿಷೇಧಾಜ್ಞೆ









