ಹನುಮಗಿರಿ ಬ್ರಹ್ಮಕಲಶೋತ್ಸವ-ಪುತ್ತೂರಿನಿಂದ ಬೃಹತ್ ಹಸಿರುಹೊರೆಕಾಣಿಕೆ ಮೆರವಣಿಗೆ



(ನ್ಯೂಸ್ಕಡಬ) newskadaba.com,  ಎ.09 ಪುತ್ತೂರು: ಹನುಮಗಿರಿ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಎ.೯ರಿಂದ ೧೨ರವರೆಗೆ ನಡೆಯಲಿದ್ದು, ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ವಠಾರದಿಂದ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ಸಂಜೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ವಠಾರದಲ್ಲಿ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಹಸಿರುಹೊರೆ ಕಾಣಿಕೆಯ ಮೆರವಣಿಗೆಗೆ ಚಾಲನೆ ನೀಡಿದರು.







ಬಳಿಕ ನೂರಾರು ವಾಹನಗಳಲ್ಲಿ ತುಂಬಿದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ದರ್ಬೆಯ ತನಕ ಕಾಲ್ನಡಿಗೆಯಲ್ಲಿ ಸಾಗಿ ಅಲ್ಲಿಂದ ವಾಹನಗಳ ಮೂಲಕ ಹನುಮಗಿರಿಗೆ ಸಾಗಿತು. ಶ್ರೀರಾಮ-ಸೀತಾದೇವಿ-ಹನುಮ ವೇಷಧಾರಿಗಳ ವಾಹನ, ಕಲ್ಲಡ್ಕ ಗೊಂಬೆ, ವಾದ್ಯ, ಚೆಂಡೆ ಮೇಳ, ಕುಣಿತ ಭಜಕರ ತಂಡ ವಿಶೇಷವಾಗಿ ಮೆರವಣಿಗೆಗೆ ಮೆರುಗು ನೀಡಿತು.
ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೊರೆಕಾಣಿಕೆ ಸಮಿತಿ ಸಂಚಾಲಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಜೀವಂಧರ್ ಜೈನ್, ರಾಕೇಶ್ ರೈ ಕೆಡೆಂಜಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಸಾಜ ರಾಧಾಕೃಷ್ಣ ಆಳ್ವ, ಮುರಳೀಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಆರ್.ಸಿ. ನಾರಾಯಣ ರೆಂಜ, ನಹುಷ ಪಿ.ವಿ. , ಕೋಟಿ ಶ್ರೀರಾಮತಾರಕ ಜಪಯಜ್ಞ ಸಮಿತಿ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಪ್ರಮುಖರಾದ ಮಾಜಿ ಶಾಸಕ ಸಂಜೀವ ಮಠಂದೂರು, ಡಾ. ಸುರೇಶ ಪುತ್ತೂರಾಯ, ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್, ತಾಲೂಕು ಯೋಜನಾಧಿಕಾರಿ ಶಶಿಧರ್, ಅರುಣ್ ಕುಮಾರ್ ಪುತ್ತಿಲ, ಗೋಪಾಲಕೃಷ್ಣ ಹೇರಳೆ, ಶ್ರೀಧರ ಪಟ್ಲ, ಯು. ಲೋಕೇಶ್ ಹೆಗ್ಡೆ, ದಿನೇಶ್ ಮೆದು, ವಿದ್ಯಾ ಗೌರಿ, ಪದ್ಮನಾಭ ಶೆಟ್ಟಿ, ಸುಂದರ ಪೂಜಾರಿ ಬಡಾವು, ಉಜ್ವಲ್ ಪ್ರಭು, ನವೀನ್ ರೈ ಕೈಕಾರ ಮೊದಲಾದವರಿದ್ದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರ್ವಹಿಸಿದರು.
ಇದಕ್ಕೂ ಮೊದಲು ಬೆಳಗ್ಗೆ ಈಶ್ವರಮಂಗಲ ಗ್ರಾಮಸ್ಥರ ಹೊರೆಕಾಣಿಕೆ ಸಮರ್ಪಣೆ ಕ್ಷೇತ್ರಕ್ಕೆ ನಡೆಯಿತು. ಬಳಿಕ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ ನಡೆಯಿತು. ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ನಿರಂತರವಾಗಿ ನಡೆಯಲಿರುವ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.






error: Content is protected !!
Scroll to Top