ಮದರಂಗಿ ಕಾರ್ಯಕ್ರಮದ ವೇಳೆ ಹಠಾತ್ ಕುಸಿತ; ನಿರೂಪಕನ ದುರಂತ ಅಂತ್ಯ

(ನ್ಯೂಸ್‌ ಕಡಬ) newskadaba.com,ಎ.11 : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿತ್ (32).

ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ವೇದಿಕೆ ಏರಿ ಮಾತು ಆರಂಭಿಸುತ್ತಿದ್ದಂತೆಯೇ ಅಶ್ವಿತ್ ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Scroll to Top