ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.13 : ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಂಜೆ ವೇಳೆಗೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ..

Scroll to Top