ಮಂಗಳೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಸ್ಟುಡಿಯೋ ಮಾಲೀಕ ಮೃತ್ಯು



(ನ್ಯೂಸ್‌ ಕಡಬ) newskadaba.com,  ಎ.14: ಕಳೆದ ಶನಿವಾರ ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಮೋಹನ್ ಕುಮಾರ್ ಮೃತ ದುರ್ದೈವಿ. ಅವರು ಪದವಿನಂಗಡಿಯಲ್ಲಿ ‘ನವ್ಯ ಸ್ಟುಡಿಯೋ’ ನಡೆಸುತ್ತಿದ್ದರು.







ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಗೋಪಾಲ್ (29) ಎಂಬುವವರು ಚಲಾಯಿಸುತ್ತಿದ್ದ ಬೈಕ್, ಮೋಹನ್ ಕುಮಾರ್ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಗೋಪಾಲ್ ರಸ್ತೆಗೆ ಬಿದ್ದಾಗ, ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.






ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಅವರು ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಮಂಗಳೂರು ಸಂಚಾರಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top