ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ – News Kadaba

ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ

(ನ್ಯೂಸ್‌ ಕಡಬ) newskadaba.com,  ಎ.15:  ನವದೆಹಲಿ:  ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಪದೋನ್ನತಿ ಮಾಡುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.
ಏಪ್ರಿಲ್ ೧೪, ೨೦೨೬ ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮೂವರು ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ನೇಮಕಗೊಂಡ ನ್ಯಾಯಾಂಗ ಅಧಿಕಾರಿಗಳು:
ರಾಜೇಶ್ವರಿ ನಾರಾಯಣ ಹೆಗಡೆ
ಕೆದಂಬಾಡಿ ಗಣೇಶ್ ಶಾಂತಿ
ಮಹದೇವಪ್ಪ ಬೃಂಗೇಶ್
ರಾಜ್ಯದ ಉನ್ನತ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸುವ ಮತ್ತು ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಪೂರಕವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕೊಲಿಜಿಯಂನ ಈ ಶಿಫಾರಸನ್ನು ಈಗ ಕೇಂದ್ರ ಕಾನೂನು ಸಚಿವಾಲಯಕ್ಕೆ ಕಳುಹಿಸಲಾಗುವುದು. ಅಲ್ಲಿಂದ ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಅಧಿಕೃತವಾಗಿ ನೇಮಕಾತಿ ಆದೇಶ ಹೊರಬೀಳಲಿದೆ.ಕರ್ನಾಟಕ ಹೈಕೋರ್ಟ್‌ಗೆ ಇಬ್ಬರು ಮಹಿಳಾ ನ್ಯಾಯಾಂಗ ಅಧಿಕಾರಿಗಳು ಶಿಫಾರಸುಗೊಂಡಿರುವುದು ಈ ನೇಮಕಾತಿಯ ವಿಶೇಷತೆಯಾಗಿದೆ.

Scroll to Top