ರಾಜ್ಯದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಎ.17: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ರಾಜ್ಯ ಚುನಾವಣಾ ಆಯೋಗ ಮತಪತ್ರಗಳನ್ನು ಬಳಸಲಿದೆ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಇದು ಅನ್ವಯವಾಗಲಿದೆ. ಚುನಾವಣೆಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಮತದಾನದ ಗುಪ್ತತೆಯನ್ನು ಕಾಯ್ದುಕೊಳ್ಳಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

Scroll to Top