(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದ ಮರು ಕ್ಷಣದಲ್ಲೇ ಭಿನ್ನಕೋಮಿನ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ಸಂಭವಿಸಿದೆ.
ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಧಾರ್ಮಿಕ ಕೇಂದ್ರದ ಕಡೆಗೆ ಹಾಗೂ ಮೆರವಣಿಗೆ ಕಡೆಗೆ ಪರಸ್ಪರ ಕಲ್ಲೆಸೆದಿದ್ದು, ಇದರಿಂದಾಗಿ ಹಲವರಿಗೆ ಗಾಯಗಳಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.