(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.16. ಸ್ಪಷ್ಟ ಬಹುಮತವಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಓದ್ದಾಡುತ್ತಿರುವ ಬಿಜೆಪಿ ಪಕ್ಷದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮೇ.17 ಗುರುವಾರದಂದು ನಿಗದಿಯಂತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕ್ಷಣ ಕ್ಷಣವೂ ಕುತೂಹಲಕಾರಿ ತಿರುವು ಪಡೆಯುತ್ತಿರುವ ರಾಜ್ಯ ರಾಜಕಾರಣದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಯಬಹುದೆಂಬ ಅನುಮಾನದ ಬೆನ್ನಲ್ಲೇ ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ರಾಜ್ಯಪಾಲರು ಹನ್ನೊಂದು ದಿನಗಳ ಕಾಲಾವಕಾಶ ನೀಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಕುದುರೆ ವ್ಯಾಪಾರದ ಭೀತಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್ ಗಳತ್ತ ಕರೆದೊಯ್ಯಲು ಸಿದ್ಧತೆ ನಡೆಸಿದೆ.