ಉಡುಪಿ: ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

(ನ್ಯೂಸ್‌ ಕಡಬ) newskadaba.com,  ಎ.20 ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಳಿಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ವೆಲ್ಡಿಂಗ್ ಮಾಡುವಾಗ ಬಂದ ಕಿಡಿಗಳು ಹತ್ತಿರದಲ್ಲಿದ್ದ ಎಣ್ಣೆಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಘಟಕದಲ್ಲಿದ್ದ ಬಾಯ್ಲರ್‌ಗೂ ಹರಡಿದೆ ಎಂದು ಹೇಳಲಾಗಿದೆ.

ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅಗ್ನಿ ಅವಘಡದಿಂದಾಗಿ ಘಟಕಕ್ಕೆ ಗಣನೀಯ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Scroll to Top