ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  .22: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.







ಈಗಾಗಲೇ ಕರುನಾಡು ಬಿಸಿಲ ಧಗಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ.






ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!
Scroll to Top