ನೆಕ್ಕಿತ್ತಡ್ಕ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಾರುಗಳೆರಡರ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿಗೆ ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನೆಕ್ಕಿತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಲ್ಲಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಕಡಬ ಸಮೀಪದ ಹೊಸ್ಮಠ ನಿವಾಸಿ ಲಾರೆನ್ಸ್ ಹಾಗೂ ಬಾಲಕನೋರ್ವ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಕಡಬ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

Scroll to Top