ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.17. ಕರ್ನಾಟಕದ 23 ನೇ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಗ್ಗೆ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ ಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಯಡಿಯೂರಪ್ಪರಿಗೆ ಪ್ರಮಾಣವಚನ ಬೋಧಿಸಿದರು. ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು.

Scroll to Top