(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.17. ಕರ್ನಾಟಕದ 23 ನೇ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಗ್ಗೆ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರೈತರ 1 ಲಕ್ಷ ರೂ. ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಬಿಜೆಪಿಯು ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಇಂದು ಒಂದು ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಬಿಜೆಪಿಯು ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಅದರಂತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರು ಕ್ಷಣವೇ ರೈತರ ಹಾಗೂ ನೇಕಾರರ ಸಾಲದ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಯವರಲ್ಲಿ ಮಾಹಿತಿ ಕೇಳಿದ್ದು, ಒಂದೆರಡು ದಿನಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.