ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ► ಮಧ್ಯ ರಸ್ತೆಯಲ್ಲೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.17. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿಯುಂಟಾದ ಪರಿಣಾಮ‌ ಕಾರು ಸುಟ್ಟು ಕರಕಲಾದ ಘಟನರ ನಗರದ ಜ್ಯೋತಿಯ ಮುಖ್ಯ ರಸ್ತೆಯಲ್ಲಿ ಗುರುವಾರದಂದು ನಡೆದಿದೆ.

ನಗರದ ಜ್ಯೋತಿಯ‌ ಅಂಬೇಡ್ಕರ್ ವೃತ್ತದ ಬಳಿ ಚಲಿಸುತ್ತಿದ್ದ ಇಂಡಿಕಾ ಕಾರಿನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಕಾರನ್ನು ಆವರಿಸಿದೆ. ಅಪಾಯದ ಮುನ್ಸೂಚನೆ ಅರಿತ ಚಾಲಕ ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದರಿಂದ ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಕಾರು ಭಾಗಶಃ ಸುಟ್ಟು‌ ಕರಕಲಾಗಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು.

Also Read  ಯೋಗ ತರಬೇತುದಾರರಿಂದ - ಅರ್ಜಿ ಆಹ್ವಾನ

error: Content is protected !!
Scroll to Top