ವಿವಿಧ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರಕಾರ ► ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ವರ್ಗಾವಣೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮೇ.17. ನಿಷ್ಠಾವಂತ ಐಪಿಎಸ್ ಅಧಿಕಾರಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅಣ್ಣಾಮಲೈಯವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿ ತನ್ನದೇ ಕಾರ್ಯವೈಖರಿಯಿಂದ ಯುವ ಮನಸ್ಸುಗಳನ್ನು ಗೆದ್ದಿದ್ದ ಅಣ್ಣಾಮಲೈ 2016 ರ ಆಗಸ್ಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಅಲ್ಲಿಯೂ ತನ್ನದೇ ಶೈಲಿಯಲ್ಲಿ ಅಪರಾಧಿ ಕೃತ್ಯಗಳಿಗೆ ಕಡಿವಾಣ ಹಾಕಿದ್ದ ಅವರನ್ನು ನೂತನ ಸರಕಾರ ಅಸ್ಥಿತ್ವಕ್ಕೆ ಬಂದ ಕೂಡಲೇ ರಾಮನಗರ ಜಿಲ್ಲೆಗೆ ವರ್ಗಾಯಿಸಲಾಗಿದೆ.

Scroll to Top