ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ



(ನ್ಯೂಸ್‌ ಕಡಬ) newskadaba.com,  .29 ಮದುವೆಯಾಗದೇ ಹೆಣ್ಣು ಸಿಗದೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.ವಿನಯ್‌ (35) ಆತಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.







ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಗುಡ್ದೂರು ಗ್ರಾಮದವರಾದ ಈತ ಕಳೆದ ಹತ್ತು ವರ್ಷಗಳಿಂದ ಬೇಲೂರಿನಲ್ಲಿ ವಾಸವಾಗಿದ್ದು, ಎಲೆಕ್ಟ್ರೀಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಮದುವೆಯಾಗಲು ಹಲವು ವರ್ಷಗಳಿಂದ ಕನ್ಯೆ ಹುಡುಕಾಟ ನಡೆಸುತ್ತಿದ್ದ ವಿನಯ್‌ ಅವರಿಗೆ ಹೊಂದಾಣಿಕೆಯ ಹೆಣ್ಣು ಸಿಗದ ಕಾರಣ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.






ಕಳೆದ ವಾರದಿಂದ ಕೆಲಸಕ್ಕೂ ತೆರಳದೆ ಮನನೊಂದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಷ್ಣು ಸಮುದ್ರ ಕೆರೆಯ ಸಮೀಪದ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

error: Content is protected !!
Scroll to Top