ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ



(ನ್ಯೂಸ್‌ ಕಡಬ) newskadaba.com,  ಮೇ.02: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.







ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು..






error: Content is protected !!
Scroll to Top