ಕೆಆರ್‌ ನಗರ : ಜನಗಣತಿ ಸಮಯದಲ್ಲಿ ಹೃದಯಾಘಾತದಿಂದ ಶಿಕ್ಷಕ ಮೃತ್ಯು



(ನ್ಯೂಸ್‌ ಕಡಬ) newskadaba.com,  ಮೇ.07:  ಜನಗಣತಿ ವೇಳೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿಯ ಸಿ.ಕೆ.ರಂಗನಾಥ್‌ ಮೃತಪಟ್ಟ ಶಿಕ್ಷಕ.







ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜನಗಣತಿ ಕಾರ್ಯಕ್ಕಾಗಿ ನಿಯೋಜಿಸಲಾಗಿತ್ತು.






ಇಂದು ಬೆಳಿಗ್ಗೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ಜನಗಣತಿ ಮಾಹಿತಿ ಪಡೆಯುವ ವೇಳೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟರೊಳಗೆ ಶಿಕ್ಷಕ ಮೃತಪಟ್ಟಿರುವುದಾಗಿ ದೃಢಪಟ್ಟಿದೆ.

ಮೃತ ಶಿಕ್ಷಕರು ಪಟ್ಟಣದ ಕೊಳಲು ರಸ್ತೆಯ ಕುವೆಂಪು ಬಡಾವಣೆಯಲ್ಲಿ ವಾಸವಾಗಿದ್ದರು. ಇವರ ಅಂತ್ಯಸಂಸ್ಕಾರ ಸ್ವಗ್ರಾಮ ಚಿಕ್ಕನಾಯಕನಹಳ್ಳಿಯಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲ ತಿಳಿಸಿದೆ.

error: Content is protected !!
Scroll to Top